ನಿವಾರ್ ಚಂಡಮಾರುತ: ರಾಜ್ಯದಲ್ಲಿ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಚಳಿ ಜೊತೆಗೆ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ನಿವಾರ್ ಚಂಡಮಾರುತದ ಪರಿಣಾಮವಾದ ಈ ಹವಾಮಾನ ವ್ಯತ್ಯಯವು ರಾಜ್ಯದ ಹಲವೆಡೆ ಕಂಡುಬAದಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ಮಂಡ್ಯ ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ನಿನ್ನೆಯೇ ಯೆಲ್ಲೊ ಅಲರ್ಟ್ ಘೋಷಿಸಲಾಗಿತ್ತು. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಅಲ್ಲಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಮೂರು ದಿನ ಮತ್ತು ಕರಾವಳಿಯಲ್ಲಿ ನ.26 ಮತ್ತು 27ರಂದು ಅಲ್ಲಲ್ಲಿ ಮಳೆಯಾಗಲಿದೆ. […]




