ಕೋವಿಡ್ ಲಸಿಕೆ ಕೊರತೆಗೆ ರಾಜ್ಯಗಳು ಹೊಣೆ: ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರದ ಕೋವಿಡ್ ಸಲಹೆಗಾರ ವಿ.ಕೆ.ಪಾಲ್, ಲಸಿಕೆ ಕೊರತೆಗೆ ರಾಜ್ಯ ಸರ್ಕಾರಗಳೇ ಹೊಣೆ ಎನ್ನುವ ಮೂಲಕ ಕೈ ತೊಳೆದುಕೊಂಡಿದ್ದಾರೆ. ರಾಜ್ಯ ಹಾಗೂ ದೇಶದೆಲ್ಲೆಡೆ ಲಸಿಕೆ ಕೊರತೆ ತೀವ್ರವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪೂರೈಕೆ ಕೊರತೆ ಇದ್ದು, ಖಾಸಗಿ ಆಸ್ಪತ್ರೆಗಳು ಡೋಸ್ ಒಂದಕ್ಕೆ 800 ರಿಂದ 1400 ರೂ.ವರೆಗೆ ತೆಗೆದುಕೊಳ್ಳುತ್ತಿವೆ. ಜತೆಗೆ, ಸೇವಾ ಶುಲ್ಕವನ್ನು 100 ರೂ.ನಿಂದ 300 ರೂ.ಗೆ ಹೆಚ್ಚಿಸಿಕೊಂಡಿವೆ. ರಾಜ್ಯ ಸರ್ಕಾರಗಳು ನೇರವಾಗಿ ಅಂತಾರಾಷ್ಟ್ರೀಯ ಟೆಂಡರ್ ಕರೆದು, ಲಸಿಕೆ ಪಡೆದುಕೊಳ್ಳಲು ಲಸಿಕೆಗೆ ಸಂಬಂಧಿಸಿದಂತೆ ಸುಪ್ರೀಂ/ಹೈ ಕೋರ್ಟ್ ಸರ್ಕಾರಗಳಿಗೆ […]