ಆರ್‌ಬಿಐ ತೀರ್ಮಾನ ಜೈ ಎಂದ ಬ್ಯಾಂಕಿಂಗ್ ವಲಯ……
ನವದೆಹಲಿ (ಪಿಟಿಐ): ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಿಸುತ್ತಲೇ ಬೆಳವಣಿಗೆಯನ್ನೂ ಸಾಧಿಸುವ ಉದ್ದೇಶದಿಂದ ಆರ್‌ಬಿಐ ರೆಪೊ ದರವನ್ನು ಬದಲಾಯಿಸದೆ, ವ್ಯವಸ್ಥೆಯಲ್ಲಿ ನಗದು ಲಭ್ಯತೆ ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿದೆ ಎಂಬ ಅಭಿಪ್ರಾಯವನ್ನು ಆರ್ಥಿಕ ತಜ್ಞರು ವ್ಯಕ್ತಪಡಿಸಿದ್ದಾರೆ. ಈಗಿನ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಆರ್‌ಬಿಐ ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಆರ್‌ಬಿಐ ಶುಕ್ರವಾರ ತೆಗೆದುಕೊಂಡ ತೀರ್ಮಾ ನವು ತನ್ನಿಂದ ಸಾಧ್ಯವಾದಷ್ಟು ಮಟ್ಟಿಗೆ ನಗದು ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದ್ದಾಗಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ನ ಮುಖ್ಯ ಅರ್ಥಶಾಸ್ತ್ರಜ್ಞ ಅಭೀಕ್ ಬರುವಾ ಹೇಳಿದ್ದಾರೆ. […]