ವೇಮುಲ, ತಡ್ವಿ, ಸಾಹಿಲ್; ಸಾಂಸ್ಥಿಕ ಹತ್ಯೆಗಳ ಮುಂದುವರಿಕೆ
ಐಐಟಿ ಬಾಂಬೆಯ ಎನರ್ಜಿ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ 2ನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸೆಪ್ಟೆಂಬರ್ 18,2026 ರಂದು ವಿದ್ಯಾರ್ಥಿ ನಿಲಯದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ತಕ್ಷಣ ಕಣಕ್ಕಿಳಿದ ಕೆಸರು ಎರಚುವ ಪಡೆ, ʻಸಾಹಿಲ್ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದರುʼ ಎಂದು ಮಿಥ್ಯಾರೋಪ ಹೊರಿಸಿ, ವಿಡಿಯೋ ಬಿಡುಗಡೆ ಮಾಡಿತು. ಅಂಬೇಡ್ಕರ್, ಪೆರಿಯಾರ್, ಫುಲೆ ಸ್ಟಡಿ ಸರ್ಕಲ್ ಪ್ರತಿಭಟನೆ ಹಿನ್ನೆಲೆಯಲ್ಲಿ ಐಐಟಿ ತನ್ನ ಹಿಂದಿನ ಹೇಳಿಕೆ ಹಿಂಪಡೆಯಿತು. ಆದರೆ, ಅಷ್ಟರಲ್ಲಿ ʻಪರೀಕ್ಷೆಯಲ್ಲಿ ನಕಲುʼ ನರೇಟಿವ್ ವ್ಯಾಪಕವಾಗಿ ಹರಡಿತ್ತು. […]
ಜಾತಿಯೆಂಬುದು ಕಣ್ಣಿಗೆ ಇರಿಯುವ ವಾಸ್ತವ, ನಿವಾರಣೆಯಾಗದ ಜಾಡ್ಯ
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಒಂದು ವರ್ಗದ ಜನರು, ಧನಾಡ್ಯರು ಹಾಗೂ ಪ್ರತಿಪಕ್ಷ ಬಿಜೆಪಿ ಸಮೀಕ್ಷೆಯನ್ನು ಹೀನಯಿಸಿದ್ದಲ್ಲದೆ, ಸಮಾಜವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ. ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಸ್ನೇಹಿತರಾದ ಎಚ್.ಎಚ್. ರೇಣುಕಾರಾಧ್ಯ ಅವರ ಅನುಭವವು ಜಾತಿ ತನ್ನ ಬೇರನ್ನು ಎಷ್ಟು ಆಳವಾಗಿ ಬಿಟ್ಟಿದೆ ಎಂಬು ದನ್ನು ತೋರಿಸಿಕೊಡುತ್ತದೆ. ಇದೇ ಹೊತ್ತಿನಲ್ಲಿ ಅಧ್ಯಯನವೊಂದು ನಗರಗಳಲ್ಲಿ ಪೌರತ್ವವು ಕಾಗದದ ಮೇಲೆ ಮಾತ್ರ ಸಮಾನವಾಗಿದೆ; ಆದರೆ, ಆಚರಣೆಯಲ್ಲಿ ಅಸಮಾನವಾಗಿದೆ ಎಂದು ಹೇಳಿದೆ. ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರವು […]

